ಭಾರತದ 75ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ತರಂಗಿಣಿ ಮಿತ್ರ ಮಂಡಳಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಡುಬಿದ್ರಿ 9 ನೇ ವಾರ್ಡಿನ ಪಂಚಾಯತ್ ಸದಸ್ಯೆ ಶ್ರೀಮತಿ ಸುಜಾತಾ ಆಚಾರ್ ಅವರು ಧ್ವಜಾರೋಹಣ ನೆರವೇರಿಸಿದರು. ತರಂಗಿಣಿ ಮಿತ್ರ ಮಂಡಳಿಯ ಅಧ್ಯಕ್ಷ ಶ್ರೀ ರಮಾಕಾಂತ ರಾವ್, ಕಾರ್ಯದರ್ಶಿ ಶ್ರೀ ಹರಿಕೃಷ್ಣ ರಾವ್, ಇತರ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜ ವಂದನೆಗೈದರು.
ಕಾರ್ಯಕ್ರಮವನ್ನು ನಿರೂಪಿಸಿದ ಶ್ರೀಧರ ಆಚಾರ್ ಅವರು ಮಾತನಾಡುತ್ತಾ ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನೆಗಳನ್ನು ಸಲ್ಲಿಸಿದರು. ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂಘಟನೆ-ಸಂರಕ್ಷಣೆಯ ಕರ್ತವ್ಯವನ್ನೂ ನಿರ್ವಹಿಸಲು ಮಂಡಳಿಯ ಅಧ್ಯಕ್ಷರಾದ ಶ್ರೀ ರಮಾಕಾಂತ್ ಅವರು ಕರೆಕೊಟ್ಟರು. ಕೊನೆಯದಾಗಿ ಕಾರ್ಯದರ್ಶಿ ಶ್ರೀ ಹರಿಕೃಷ್ಣ ರಾವ್ ಇವರ ವಂದನೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.